Bangalore: ಮಹಿಳೆಗೆ ಬಿಎಂಟಿಸಿ ಬಸ್ ಢಿಕ್ಕಿ; ಸಾವು
Thursday, December 28, 2023
ಬೆಂಗಳೂರು: ಬೆಂಗಳೂರಿನ ಸುಬ್ಭಯ್ಯ ಸರ್ಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
ಕಬ್ಬನ್ ಪೇಟೆಯ ನಿವಾಸಿ ಪುಷ್ಪಾ ಮೃತಪಟ್ಟವರು.
ಮನೆಯ ಸಮೀಪದಲ್ಲಿರುವ ಬೇಕರಿಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಈ ಅಪಘಾತ ನಡೆದಿದ್ದು, ತಲೆಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಹೆಚ್ಚಿನ ರಕ್ತಸ್ರಾವವಾಗಿತ್ತು. ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಹಲಸೂರು ಗೇಟ್ ಠಾಣಾ ಪೊಲೀಸರು ಬಿಎಂಟಿಸಿ ಬಸ್ ಚಾಲಕ ನಾಗರಾಜ್‌ಅವರನ್ನು ಬಂಧಿಸಿದ್ದು, ಅಫಘಾತಕ್ಕೆ ಕಾರಣ ಏನು ಎನ್ನುವ ನಿಖರ ಮಾಹಿತಿಯನ್ನು ಪಡೆದುಕೊಳ್ಳಲು ಚಾಲಕನನ್ನು ವಿಚಾರಣೆಗೆ ಒಳಪಡಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.