Bantwal: ಕೋಟಾ ಶ್ರೀನಿವಾಸ ಪೂಜಾರಿಗೆ ಅಭಿನಂದನೆ
Friday, December 29, 2023
ಬಂಟ್ವಾಳ: ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕರಾಗಿ ನೇಮಕಗೊಂಡ ಕೋಟಾ ಶ್ರೀನಿವಾಸ ಪೂಜಾರಿಯವರು ಶುಕ್ರವಾರ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಈ ಸಂದರ್ಭ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ನೇತೃತ್ವದಲ್ಲಿ ವಿ.ಪ.ನ ಪ್ರತಿಪಕ್ಷ ನಾಯಕ ಕೋಟಾ ಶ್ರಿನಿವಾಸ ಪೂಜಾರಿಯವರನ್ನು ಅಭಿನಂದಿಸಲಾಯಿತು.
ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಮಾಜಿ ಬೂಡಾ ಅಧ್ಯಕ್ಷ ಬಿ. ದೇವದಾಸ್ ಶೆಟ್ಟಿ ಪ್ರಮುಖರಾದ ಗಣೇಶ್ ರೈ ಮಾಣಿ, ರಮಾನಾಥ ರಾಯಿ ಪುರುಷೋತ್ತಮ ಶೆಟ್ಟಿ ವಾಮದಪದವು, ರೋನಾಲ್ಡ್ ಡಿ’ಸೋಜಾ, ಆನಂದ ಶಂಭೂರು, ಯಶೋಧರ ಕರ್ಬೆಟ್ಟು, ವಸಂತ ಸಾಲ್ಯಾನ್, ಪ್ರಣಾಮ್, ಸೀತಾರಾಮ ಪೂಜಾರಿ, ಗುರುದತ್ ನಾಯಕ್, ಅಭಿಷೇಕ್ ರೈ, ಸಂತೋಷ್ ಕುಮಾರ್ ಬೆಟ್ಟು, ಜಯರಾಂ ಭಂಡಾರಿ ವಿಶ್ವನಾಥ ಚೆಂಡ್ತಿಮಾರು ಮತ್ತಿತರರು ಉಪಸ್ಥಿತರಿದ್ದರು.