Mysore: ಸಿದ್ದರಾಮಯ್ಯರ ಅವಹೇಳನ: ಪ್ರತಾಪ ಸಿಂಹ ವಿರುದ್ಧ FIR ದಾಖಲು

Mysore: ಸಿದ್ದರಾಮಯ್ಯರ ಅವಹೇಳನ: ಪ್ರತಾಪ ಸಿಂಹ ವಿರುದ್ಧ FIR ದಾಖಲು

 


ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಜೆ. ವಿಜಯಕುಮಾರ್ ನೀಡಿರುವ ದೂರನ್ನು ಆಧರಿಸಿ ಭಾರತೀಯ ದಂಡ ಸಂಹಿತೆ ೫೦೪ (ಉದ್ದೇಶಪೂರ್ವಕವಾಗಿ ನಿಂದಿಸಿ ಶಾಂತಿಭಂಗ ಉಂಟು ಮಾಡುವುದು), ೧೫೩ (ಕೋಮುಗಳ ನಡುವೆ ದ್ವೇಷ ಹುಟ್ಟಿಸುವುದು) ಅಡಿ ಪ್ರತಾಪ ಸಿಂಹ ವಿರುದ್ಧ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಣಸೂರಿನಲ್ಲಿ ಮಂಗಳವಾರ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಪ್ರತಾಪ ಸಿಂಹ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ‘ಸೋಮಾರಿ ಸಿದ್ಧ’ ಎಂದು ಏಕವಚನದಲ್ಲಿ ಸಂಬೋಧಿಸಿದ್ದಲ್ಲದೆ, ಜಾತಿ ಜಾತಿಗಳ ನಡುವೆ ದ್ವೇಷ ಹರಡಿಸುವ ಕೆಲಸ ಮಾಡಿದ್ದಾರೆಂದು ಸುಳ್ಳು ಆರೋಪ ಮಾಡಿದ್ದಾರೆ. ಪ್ರತಾಪ ಸಿಂಹ, ಹಿಂದೂ-ಮುಸ್ಲಿಂ ಸಮುದಾಯದ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ವಹಿಸಬೇಕು ಎಂದು ವಿಜಯಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article