Udupi: ಕರವೇ ರಾಜ್ಯಾಧ್ಯಕ್ಷರ ಬಂಧನ ಖಂಡಿಸಿ ಪ್ರತಿಭಟನೆ
Friday, December 29, 2023
ಉಡುಪಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ. ಎ. ನಾರಾಯಣ ಗೌಡ ಹಾಗೂ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ಕರವೇ ಕಾರ್‍ಯಕರ್ತರು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಕಡ್ಡಾಯ ಕನ್ನಡ ನಾಮಫಲಕ ಅಭಿಯಾನದ ನೇತೃತ್ವ ವಹಿಸಿ ಪ್ರತಿಭಟನಾ ಜಾಗೃತಿ ಹೋರಾಟ ಹಮ್ಮಿಕೊಂಡಿದ್ದ ನಾರಾಯಣ ಗೌಡ ಮತ್ತು ಕಾರ್ಯಕರ್ತರನ್ನು ಅಕ್ರಮವಾಗಿ ಬಂಧಿಸಿ ಅಗೌರವದಿಂದ ನಡೆಸಿಕೊಂಡಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಅವರನ್ನು ಬೇಷರತ್ತಾಗಿ ಬಿಡುಗಡೆಗೊಳಿಸಬೇಕು ಎಂದು ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಆಗ್ರಹಿಸಿದರು.
ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರವೇ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಗೀತಾ ಪಾಂಗಾಳ, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಲಾಲ್, ಕಾರ್ಯದರ್ಶಿ ಸಿದ್ದಣ್ಣ ಎಸ್. ಪೂಜಾರ್, ಎಸ್. ಕೃಷ್ಣಕುಮಾರ್ ಉಡುಪಿ ತಾಲೂಕು ಅಧ್ಯಕ್ಷೆ ಹೆಲೆನ್ ಸೋನ್ಸ್ ಮೊದಲಾದವರಿದ್ದರು.