Chikkamagaluru: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024: ಅಂತಿಮ ಮತದಾರರ ಪಟ್ಟಿ ಪ್ರಕಟ

Chikkamagaluru: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024: ಅಂತಿಮ ಮತದಾರರ ಪಟ್ಟಿ ಪ್ರಕಟ


 ಚಿಕ್ಕಮಗಳೂರು: ಚಿಕ್ಕಮಗಳೂರು 5 ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 9,62,998 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2024, ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಕರ್ತರನ್ನುದ್ವೇಶಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರದರ್ಶಿಸಲಾಗುತ್ತಿದೆ ಎಂದ ಅವರು ಅಂತಿಮ ಮತದಾರರ ಪಟ್ಟಿಯಲ್ಲಿ 4,89,590 ಮಹಿಳಾ ಮತದಾರರು 4,73,377 ಪುರುಷ ಮತದಾರರು ಹಾಗೂ 31 ಇತರೆ ಮತದಾರರು ಸೇರಿ ಒಟ್ಟು 9,62,998 ಮತದಾರರಿದ್ದಾರೆ. ಜಿಲ್ಲೆಯಲ್ಲಿ ಪುರಷರಿಗಿಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿಸಿದರು.

ಮತದಾರರು ತಮ್ಮ ಮತದಾರರ ಮಾಹಿತಿಯನ್ನು  ಹೆಸರು, ತಂದೆಯ ಹೆಸರು, ಸಂಬಂಧ, ಲಿಂಗ, ಜನ್ಮ, ದಿನಾಂಕ ಮತ್ತು ಫೋಟೋ ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಚುನಾವಣಾಧಿಕಾರಿಯವರ ವೆಬ್ ಸೈಟ್ www.ceokarnataka.kar.nic.in <http://www.ceokarnataka.kar.nic.in>  ನಲ್ಲಿ ಸಹ ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗುವುದು ಎಂದರು.

ಸಾರ್ವಜನಿಕರು, ಮತದಾರರು ಯಾವುದೇ ಕಛೇರಿಗೆ ಹೋಗದೆ ಅವರಿರುವ ಸ್ಥಳದಿಂದಲೇ webportal-voters.eci.gov.in, voter Helpline Mobile App ಹಾಗೂ 1950 voter Helpline ಮುಖಾಂತರ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಪರಿಶೀಲಿಸಿ ಆಗಿರುವ ತಪ್ಪುಗಳಿಗೆ ಸಂಬಂಧಪಟ್ಟ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

18 ವರ್ಷ ತುಂಬಿದ ಅರ್ಹ ಯುವ ಮತದಾರರ ಸೇರ್ಪಡೆಗೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಕಾಲೇಜುಗಳಲ್ಲಿ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಜಾಗೃತಿ ಮೂಡಿಸಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ಜಿತೇಂದರ್ ಕುಮಾರ್ ಇದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article