Dharmastala: ಮೇ.1: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Dharmastala: ಮೇ.1: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.1 ರಂದು ಸಂಜೆ 6.45ಕ್ಕೆ ಗೋಧೋಳಿ ಲಗ್ನದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,777 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 20ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 08256-266644, ವಾಟ್ಸಪ್ ನಂ. 9663464648, 8147263422 ಸಂಪರ್ಕಿಸಬಹುದಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article