Mangalore: ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ 2023-24 ಕಾರ್ಯಕ್ರಮ
Wednesday, January 31, 2024
ಮಂಗಳೂರು: ಭಾರತ ಸೇವಾದಳ ಜಿಲ್ಲಾ ಸಮಿತಿ ದ.ಕ. ಭಾರತ ಸೇವಾದಳ ತಾಲೂಕು ಸಮಿತಿ, ಮಂಗಳೂರು ದ.ಕ.ಜಿ.ಪಂ.ಹಿ ಪ್ರಾ. ಶಾಲೆ ಸ್ಯಾಂಡ್ಸ್‌ಪಿಟ್ ಬೆಂಗ್ರೆ ಇವರ ಸಂಯೋಜಕತ್ವದಲ್ಲಿ ಜ.31 ರಂದು ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ 2023-24 ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಭಾರತ್ ಸೇವಾದಳ ದಕ್ಷಿಣ ಕನ್ನಡ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ, ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹ, ಬೆಂಗ್ರೆ ಮಹಾಜನ ಸಭಾದ ಅಧ್ಯಕ್ಷ ಚೇತನ್ ಬೆಂಗ್ರೆ, ಭಾರತ್ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಟಿ.ಕೆ. ಸುಧೀರ್, ಲಾರೆನ್ಸ್ ಡಿ'ಸೋಜ ಮತ್ತಿತರರು ಉಪಸ್ಥಿತರಿದ್ದರು.