Mangalore: ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ

Mangalore: ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ


 ಮಂಗಳೂರು: ಸಂವಿಧಾನದ 75 ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26 ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಹೇಳಿದರು.

ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾ. ಬಿ.ಸಿ. ರೋಡ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಉದ್ಘಾಟಿಸಿ, ಮಾತನಾಡಿ, ಸಂವಿಧಾನ ಜಾಥಾ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಶೋಷಿತರಿಗೆ, ಅವಕಾಶ ವಂಚಿತರಿಗೆ ಅಂಬೇಡ್ಕರ್ ಅವರು ಪ್ರೇರಣಾ ಶಕ್ತಿಯಾಗಿದ್ದಾರೆ. ವೈಚಾರಿಕ ಆಲೋಚನೆಗಳ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕು. ಭಾರತವು ಬಹುತ್ವದ ರಾಷ್ಟ್ರವಾಗಿದ್ದು, ವೈವಿಧ್ಯತೆಯಲ್ಲಿ ಏಕತೆ ಇರುವ ನೆಲವಾಗಿದೆ. ಸಂವಿಧಾನವನ್ನು ನಾವು ರಕ್ಷಿಸಿದರೆ, ನಮ್ಮನ್ನು ಸಂವಿಧಾನವು ರಕ್ಷಿಸಲಿದೆ. ಪ್ರಜಾಪ್ರಭುತ್ವದ ಕತ್ತು ಹಿಚುಕುವ ಪ್ರಯತ್ನಗಳ ವಿರುದ್ಧ ನಾವು ಜಾಗೃತರಾಗಬೇಕಿದೆ. ಆದರೆ, ಇಂದು ಸಂವಿಧಾನವು ಅಪಾಯದತ್ತ ಸಾಗುತ್ತಿದೆ ಎಂದು ಸಚಿವರು ಹೇಳಿದರು. 

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲಿನಿ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಸ್ವಾಗತಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article