Mangalore: ಶಾಲೆಯ ಕೊಠಡಿಗಳ ಉದ್ಘಾಟನೆ
Sunday, January 28, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬಜಾಲ್ ಪಡ್ಪು ಇಲ್ಲಿನ ವಿವೇಕ ಶಾಲಾ ಯೋಜನೆಯಡಿ 27.80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಎರಡು ನೂತನ ಕೊಠಡಿಗಳನ್ನು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು.
2022-23ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆ ಇದಾಗಿದೆ.
ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈ ಹಿಂದೆಯೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಹಂತ ಹಂತವಾಗಿ ಅವೆಲ್ಲವೂ ಅನುಷ್ಠಾನಕ್ಕೆ ಬರಲಿವೆ ಎಂದು ಶಾಸಕರು ಹೇಳಿದರು.


