Mangalore: ಅಯೋಧ್ಯೆ ಪ್ರಾಣ ಪ್ರತಿಷ್ಠೆ: ನೇರ ಪ್ರಸಾರ ವೀಕ್ಷಣೆಗೆ ಚಾಲನೆ
Monday, January 22, 2024
ಮಂಗಳೂರು: ಅಯೋಧ್ಯೆ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜ.22 ರಂದು ಬೆಳಿಗ್ಗೆ 9.30 ಗಂಟೆಗೆ ವಿಶೇಷ ಪ್ರಾರ್ಥನೆ ಮತ್ತು ದೇವಸ್ಥಾನದ ರಾಜಾಂಗಣದಲ್ಲಿ ಅಯೋಧ್ಯ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರದ ವೀಕ್ಷಣೆ ನಡೆಯಿತು.
ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅವರಿಂದ ಬೌದ್ಧಿಕ ನಡೆಯಿತು. ಶಾಸಕ ವೇದವ್ಯಾಸ ಕಾಮತ್, ಮನಪಾ ಮೇಯರ್ ಸುಧೀರ್ ಕಣ್ಣೂರ್, ಕದ್ರಿ ದೇವಸ್ಥಾನದ ಅಧ್ಯಕ್ಷ ಎ.ಜೆ. ಶೆಟ್ಟಿ, ಟ್ರಸ್ಟಿ ಮತ್ತು ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷ ಎಚ್.ಕೆ. ಪುರುಷೋತ್ತಮ, ಟ್ರಸ್ಟಿಗಳು ಮತ್ತು ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಟ್ರಸ್ಟಿ ಕುಸುಮ ದೇವಾಡಿಗ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಹರೀಶ್ ಶೆಟ್ಟಿ, ಬಜರಂಗದಳ ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ, ಮನಪಾ ಸದಸ್ಯರಾದ ಮನೋಹರ್ ಶೆಟ್ಟಿ ಕದ್ರಿ, ಶಕೀಲ ಕಾವ ಉಪಸ್ಥಿತರಿದ್ದರು.