Moodubidre: ಶಿರ್ತಾಡಿ ಅರ್ಜುನಾಪುರ ದೇವಸ್ಥಾನಕ್ಕೆ ಸಚಿವ ಗುಂಡೂರಾವ್ ಭೇಟಿ
Wednesday, January 24, 2024
ಮೂಡುಬಿದಿರೆ: ಶಿರ್ತಾಡಿ-ವಾಲ್ಪಾಡಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಅರ್ಜುನಾಪುರ ಇಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ರಾತ್ರಿ ಭೇಟಿ ನೀಡಿದರು.
ಮಾಜಿ ಸಚಿವ ಕೆ. ಅಭಯಚಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೋಂಕೆ ನಾರಾಯಣ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಅಶೋಕ್ ಡಿ. ಶೆಟ್ಟಿ ಪರಟ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕೋಟ್ಯಾನ್, ಸಂಪತ್ ಸಾಮ್ರಾಜ್ಯ, ಚಂದ್ರಹಾಸ ಸನಿಲ್, ಸತೀಶ್ ವಿ.ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಸುಕುಮಾರ್ ಅಳಿಯೂರು ಮತ್ತಿತರರು ಉಪಸ್ಥಿತರಿದ್ದರು.