New Delhi: ಮತ್ತೆ ಬಿಜೆಪಿಗೆ ಮರಳಿದ ಶೆಟ್ಟರ್

New Delhi: ಮತ್ತೆ ಬಿಜೆಪಿಗೆ ಮರಳಿದ ಶೆಟ್ಟರ್


ಹೊಸದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳಿದ್ದಾರೆ. ಅವರನ್ನು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ ಬರಮಾಡಿಕೊಂಡರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಮತ್ತೆ ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ. ಮತ್ತೆ ಬಿಜೆಪಿಗೆ ಮರಳಬೇಕೇಂದು ಬಿಜೆಪಿ ನಾಯಕರು ಮನವಿ ಮಾಡಿದ್ದರು. ಅಮಿತ್ ಶಾ ಅವರು ನನ್ನನ್ನು ಗೌರವದಿಂದ ಬರಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ನಾನು ಕಾಂಗ್ರೆಸ್ ಪಕ್ಷ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ನವರು ನನಗೆ ಅನ್ಯಾಯ ಮಾಡಿಲ್ಲ. ಕಾಂಗ್ರೆಸ್‌ನವರು ನನಗೆ ಪಕ್ಷದಲ್ಲಿ ಸ್ಥಾನಮಾನ ನೀಡಿ ಗೌರವಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ. 

ನಾನು ಪಕ್ಷಕ್ಕೆ ಮರಳಿದ್ದು, ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು ಅದಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article