Shivamogga: ವಿವಾಹವಾಗಿದ್ದ ಯುವತಿ ಆತ್ಮಹತ್ಯೆ

Shivamogga: ವಿವಾಹವಾಗಿದ್ದ ಯುವತಿ ಆತ್ಮಹತ್ಯೆ


 ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ವರದಿಯಾಗಿದೆ.

ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (೨೪) ಎಂದು ತಿಳಿದುಬಂದಿದೆ. ಬುಧವಾರ ರಾತ್ರಿ ಮಲಗಲು ಕೊಠಡಿಗೆ ತೆರಳಿದ್ದ ಶಮಿತಾ ಬೆಳಿಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದರು.

ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ ೨೦೨೩ರ ಮಾರ್ಚ್ ತಿಂಗಳಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ಪತಿ ರಾತ್ರಿ ಪಾಳಿ ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು ಎನ್ನಲಾಗಿದೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article