Subramanya: ಕುಕ್ಕೆಗೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಭೇಟಿ

Subramanya: ಕುಕ್ಕೆಗೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಭೇಟಿ


ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರು ಪತ್ನಿ ಚೆನ್ನಮ್ಮ ಜೊತೆಗೆ ಶುಕ್ರವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.

ಧರ್ಮಸ್ಥಳದಿಂದ ಅಪರಾಹ್ನ ಕುಕ್ಕೆಗೆ ಆಗಮಿಸಿದ ಅವರು ಮೊದಲಿಗೆ ಆದಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಬಳಿಕ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ರಾತ್ರಿ ವಸತಿ ಗ್ರಹದಲ್ಲಿ ಒಅರಾಯಣ ಶ್ಲೋಕ ನೆರವೇರಿಸಿದರು. ಕ್ಷೇತ್ರಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಅವರನ್ನು ಶ್ರೀ ದೇವಳದ ವತಿಯಿಂದ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. 

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಜೆಡಿಎಸ್ ನಾಯಕರಾದ ಎಂ.ಬಿ. ಸದಾಶಿವ, ಜಾಕೇ ಮಾಧವ್ ಗೌಡ, ಸಯ್ಯದ್ ಮೀರಾ ಸಾಹೇಬ್, ಡಾ.ತಿಲಕ್ ಎ.ಎ., ಕಿಶೋರ್ ಅರಂಪಾಡಿ, ದಿನೇಶ್ ಎಂ.ಪಿ., ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಳ್ಯ ತಹಶಿಲ್ದಾರ್ ಮಂಜುನಾಥ್, ವೃತ್ತ ನಿರೀಕ್ಷಕ ಮೋಹನ್ ಕೊಠಾರಿ, ಶಿಷ್ಟಾಚಾರ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಜ.27ರಂದು ಬೆಳಗ್ಗೆ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಸೇವೆ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನದ ಮಹಾಪೂಜೆಯಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸುವರು. ಬಳಿಕ ಬಿಳಿನೆಲೆಗೆ ರಸ್ತೆ ಮಾರ್ಗದ ಮೂಲಕ ತೆರಳಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article