Ullal: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ  ಪಾದಚಾರಿ ಸ್ಥಳದಲ್ಲೇ ಸಾವು

Ullal: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಪಾದಚಾರಿ ಸ್ಥಳದಲ್ಲೇ ಸಾವು


 ಉಳ್ಳಾಲ: ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಾಡೂರು ನಿವಾಸಿ ಜನಾರ್ಧನ ಆಚಾರ್ಯ (45) ಎಂದು ಗುರುತಿಸಲಾಗಿದೆ. ಮೂಲತಃ ಅಂಬ್ಲಮೊಗರುವಿನ ನಿವಾಸಿ ಜನಾರ್ಧನ್ ಅವರು ಈ ಹಿಂದೆ ತೊಕ್ಕೊಟ್ಟು ಕರಾವಳಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯಲ್ಲಿ ಉದ್ಯೋಗಿಯಾಗಿ ಆಗಿದ್ದರು ಎಂದು ತಿಳಿದು ಬಂದಿದೆ.

ಮಾಡೂರಿನಲ್ಲಿ ಪತ್ನಿ, ಮಕ್ಕಳೊಂದಿಗೆ ವಾಸವಿದ್ದ ಜನಾರ್ಧನ್ ಶನಿವಾರ ರಾತ್ರಿ ಅಂಬಿಕಾರೋಡಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಸವಾರ ಉಳ್ಳಾಲ ಒಂಬತ್ತು ಕೆರೆ ನಿವಾಸಿ ಕಿರಣ್ ಎಂಬವರು ತಲಪಾಡಿ ಕಡೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ಕಿರಣ್ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article