Chikkamagaluru: ಭೂ ದಾಖಲೆಗಳ ಗಣಕೀಕರಣಕ್ಕೆ ಸಚಿವರಿಂದ ಚಾಲನೆ
Wednesday, February 14, 2024
ಚಿಕ್ಕಮಗಳೂರು: ಭೂ ದಾಖಲೆಗಳನ್ನು ಗಣಕೀಕರಣ ಮಾಡುವುದರಿಂದ ಯಾವುದೇ ದಾಖಲೆಗಳು ಕಳೆದು ಹೋಗುವ ಪರಿಸ್ಥಿತಿ ಉಂಟಾಗುವುದಿಲ್ಲ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಫೆ.10 ನಗರದ ತಹಸೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಭೂ ದಾಖಲೆಗಳ ಗಣಕೀಕರಣದ ಉದ್ಘಾಟನೆ ನಡೆಸಿ ಅವರು ಮಾತನಾಡಿದರು.
ಹಳೆಯ ಭೂ ದಾಖಲೆಗಳನ್ನು ಗಣಕೀಕರಣ ಮಾಡುವುದರಿಂದ ಯಾವುದೇ ದಾಖಲೆಗಳು ಕಳೆದು ಹೋಗುವ ಪರಿಸ್ಥಿತಿ ಉಂಟಾಗುವುದಿಲ್ಲ ನಿಟ್ಟಿನಲ್ಲಿ ಗಣಕೀಕರಣದ ಸದ್ಬಳಕೆಯನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.
ಶಾಸಕ ಹೆಚ್.ಡಿ. ತಮ್ಮಯ್ಯ ಮಾತನಾಡಿ, ನಮ್ಮ ಸರ್ಕಾರ ಜಾರಿ ಬಂದ ನಂತರ ಜನತೆಗೆ ಜನಸ್ನೇಹಿ ಆಡಳಿತ ತಲುಪಬೇಕೆಂಬ ಉದ್ದೇಶದಿಂದ ಈ ಡಿಜಿಟಲೀಕರಣವನ್ನು ಆರಂಭಗೊಳಿಸಿದ್ದು, ಜಿಲ್ಲೆಯ ಪ್ರತಿಯೊಬ್ಬರು ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತಹಸೀಲ್ದಾರ್ ಡಾ.ಸುಮಂತ್ ಹಾಗೂ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.