
Chikkamagaluru: ನುಗ್ಗಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಸಂಭ್ರಮದ ಸ್ವಾಗತ
Tuesday, February 6, 2024
ಚಿಕ್ಕಮಗಳೂರು: ಸಂವಿಧಾನ ಜಾಗೃತಿ ಜಾಥಾವು ಕೊಪ್ಪ ತಾಲ್ಲೂಕಿನಲ್ಲಿ ಸಂಚರಿಸುತ್ತಿದ್ದು, ಕೊಪ್ಪ ತಾಲ್ಲೂಕಿನ ನುಗ್ಗಿ, ಬಿಂತರವಳ್ಳಿ ಗ್ರಾಮ ಪಂಚಾಯಿತಿ, ಕೊಪ್ಪ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿತು.
ಪ್ರಥಮವಾಗಿ ನುಗ್ಗಿ ಗ್ರಾಮ ಪಂಚಾಯಿತಿಗೆ ಆಗಮಿಸಿದ ಜಾಗೃತಿ ರಥ ಯಾತ್ರೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಶಿಕ್ಷಕರು, ಶಾಲಾ ಮಕ್ಕಳು ಸಂಭ್ರಮದಿಂದ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ ಪುಷ್ಪಾರ್ಚನೆ ಮಾಡಿದರು.
ಆನಂತರ ಶಾಲಾ ಮಕ್ಕಳು ಡೋಲು ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ನಂತರ ಕೋಲಾಟ ಹಾಗೂ ದೇಶಭಕ್ತಿಗೀತೆ ನೃತ್ಯ ಪ್ರದರ್ಶಿಸಿದರು. ವಿದ್ಯಾರ್ಥಿಗಳಿಂದ ಸಂವಿಧಾನ ಪೀಠಿಕೆ ಭೋದಿಸಲಾಯಿತು. ಶಾಲಾ ಶಿಕ್ಷಕ ನಾಗರಾಜ ಅವರು ಸಂವಿಧಾನದ ಪ್ರಾಮುಖ್ಯತೆ ಕುರಿತು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿಯ ಪ್ರಯತ್ನದ ಫಲವಾಗಿ ನಮ್ಮ ಸಂವಿಧಾನ ರೂಪುಗೊಂಡಿದೆ. ದೇಶದ ಸರ್ವೋಚ್ಚ ಕಾನೂನು ಹಾಗೂ ಪ್ರಸ್ತಾವನೆ ನಮ್ಮ ಸಂವಿಧಾನದ ಆತ್ಮ ಎಂದು ಹೇಳಿದರು. ಶಾಲಾ ಮಕ್ಕಳು ಸಂವಿಧಾನದ ಕುರಿತು ಮಾತನಾಡಿದರು.