Chikkamagaluru: ಸಂವಿಧಾನ ಜಾಗೃತಿ ಜಾಥಾ ಪೂರ್ಣ ಕುಂಭದ ಮೂಲಕ ಸ್ವಾಗತ
Thursday, February 1, 2024
ಚಿಕ್ಕಮಗಳೂರು: ಸಂವಿಧಾನ ಜಾಗೃತಿ ಜಾಥಾವು ಇಂದು ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ, ಬಿದರಹಳ್ಳಿ, ತ್ರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ರಥವನ್ನು ಪೂರ್ಣ ಕುಂಭದ ಮೂಲಕ ಸ್ವಾಗತಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಸಂವಿಧಾನದ ಬಗ್ಗೆ ಸರ್ವರಿಗೂ ಅರಿವು ಮೂಡಿಸುವ ಕಾರ್ಯಕ್ರಮ ಇದಾಗಿದ್ದು, ಕಾರ್ಯಕ್ರಮದ ಪ್ರಯೋಜನವನ್ನು ಪ್ರತಿಯೊಬ್ಬರು ಪಡೆದುಕೊಳ್ಳುವಂತೆ ಹೇಳಿದರು.
ಫೆಬ್ರವರಿ 2 ರಂದು ರಥವು ಕುಂದೂರು, ಬಿ. ಹೊಸಹಳ್ಳಿ, ಜಾವಳಿ, ಸುಂಕಸಾಲೆ, ಇಡಕಣಿ, ಮರಸಣಿಗೆ, ಕಳಸ,ಮತ್ತು ಸಂಸೆ ಗ್ರಾಮ ಪಂಚಾಯತ್ ಮೂಲಕ ಹಾದುಹೋಗಲಿದೆ. ಜಾಥವು ಆಗಮಿಸುವ ಎಲ್ಲಾ ಗ್ರಾಮ ಪಂಚಾಯತ್ಗಳ ಸಿಬ್ಬಂದಿಗಳು, ಜನಪ್ರತಿನಿಧಿಗಳು, ಸಂಘಟನೆಗಳ ಮುಖಂಡರುಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


