Chikkamagaluru: ನಂದಿಬಟ್ಟಲು ಗ್ರಾಮದಲ್ಲಿ ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ
ಚಿಕ್ಕಮಗಳೂರು: ಸಂವಿಧಾನ ಜಾಗೃತಿ ಜಾಥಾವು ಫೆಬ್ರವರಿ 12 ರಂದು ತರೀಕೆರೆ ತಾಲ್ಲೂಕಿನಲ್ಲಿ ಸಂಚರಿಸುತ್ತಿದ್ದು, ತರೀಕೆರೆ ತಾಲ್ಲೂಕಿನ ನಂದಿಬಟ್ಟಲು, ತಿಗಡ, ದೋರನಾಳು, ಸುಣ್ಣದಹಳ್ಳಿ ಮತ್ತು ಗುಲ್ಲದಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿತು.
ಪ್ರಥಮವಾಗಿ ನಂದಿಬಟ್ಟಲು ಗ್ರಾಮ ಪಂಚಾಯತಿಗೆ ಆಗಮಿಸಿದ ಜಾಗೃತಿ ರಥ ಯಾತ್ರೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ದಲಿತ ಮುಖಂಡರು, ಶಿಕ್ಷಕರು, ಶಾಲಾ ಮಕ್ಕಳು, ಅಂಗನವಾಡಿ ಸಿಬ್ಬಂದಿಗಳು, ಸ್ವಸಹಾಯ ಸಂಘಗಳು, ಸ್ತೀ ಶಕ್ತಿ ಸಂಘದ ಸದಸ್ಯರುಗಳು ಮತ್ತು ಸಾರ್ವಜನಿಕರು ಸಂಭ್ರಮದಿಂದ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿ ಪುಷ್ಪಾರ್ಚನೆ ಮಾಡಿದರು.
ಶಾಲಾ ಮಕ್ಕಳು, ಛದ್ಮವೇಷಧಾರಿಗಳು, ಶಾಲಾ ಮಕ್ಕಳು ವಿವಿಧ ವೇಷ ಭೂಷಣಗಳೊಂದಿಗೆ, ಬೈಕ್ ರ್ಯಾಲಿ, ಟ್ರ್ಯಾಕ್ಟರ್ನಲ್ಲಿ ವಿವಿಧ ಚಿತ್ರಕಲೆಯುಳ್ಳ ಟ್ಯಾಬ್ಲ್ಯೂ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಡ್ರಂಸೆಟ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ನಂತರ ಗ್ರಾಮ ಪಂಚಾಯತ್ ಶಿಕ್ಷಕರು ಸಂವಿಧಾನ ಪೀಠಿಕೆ ಭೋದಿಸಲಾಯಿತು. ಶಾಲಾ ಮಕ್ಕಳು ದೇಶಭಕ್ತಿ ಗೀತೆ ಹಾಡಿದರು, ಪಿರಮಿಡ್ ನೃತ್ಯ ಹಾಗೂ ಭೀಮಾ ಹಾಡನ್ನು ಹಾಡಿದರು. ವರ್ತೆಗುಂಡಿ ಶಾಲಾ ಮಕ್ಕಳು ಕಿರುನಾಟಕ ಪ್ರದರ್ಶಿಸಿದರು. ಶಿಕ್ಷಕರು ಸಂವಿಧಾನದ ಭಾಷಣ ಮಾಡಿದರು.

