Dharmastala: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ
Thursday, February 1, 2024
ಧರ್ಮಸ್ಥಳ: ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವದ ಅಂಗವಾಗಿ ಗುರುವಾರ ತೋರಣಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಶ್ರೀ ದಿವ್ಯಸಾಗರ ಮುನಿಮಹಾರಾಜರು, ಶ್ರೀ ಆದಿಸಾಗರ ಮುನಿಮಹಾರಾಜರು, ಶ್ರೀ ನಿರ್ದೋಷಸಾಗರ ಮುನಿಮಹಾರಾಜರು ಮತ್ತು ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು.
ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಇಂದು ಪಾದಾಭಿಷೇಕ:
ಶುಕ್ರವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಬಾಹುಬಲಿ ಸ್ವಾಮಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ. ಕಾರ್ಕಳ ಜೈನಮಠದ ಶ್ರೀ ಲಲಿತಕೀರ್ತಿಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.