Dharmasthala: ಹೆಗ್ಗಡೆ ಅವರನ್ನು ಭೇಟಿಯಾದ ಸಚಿವ ಖಂಡ್ರೆ
Monday, February 5, 2024
ಧರ್ಮಸ್ಥಳ: ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪತ್ನಿ ಗೀತಾ ಖಂಡ್ರೆ ಹಾಗೂ ಪುತ್ರರಾದ ಸಾಗರ್ ಖಂಡ್ರೆ ಮತ್ತು ಗುರು ಖಂಡ್ರೆ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು. ಹೆಗ್ಗಡೆಯವರನ್ನು ಸಚಿವರು ಶ್ರದ್ಧಾ-ಭಕ್ತಿಯಿಂದ ಗೌರವಿಸಿದರು. ತಮ್ಮ ಇಲಾಖೆಯ ಯೋಜನೆಗಳ ಬಗ್ಗೆ ಮಾತುಕತೆ ನಡೆಸಿದರು.