Mangalore: ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಕಂಚು
Thursday, February 1, 2024
ಮಂಗಳೂರು: ಶಕ್ತಿ ಪದವಿ ಪೂರ್ವಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶಾರ್ವಿ ಆರ್. ಶೆಟ್ಟಿ ಅವರು ಚೆನೈನಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.
ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಕ್, ಆಡಳಿತಾಧಿಕಾರಿ ಡಾ. ಕೆ.ಸಿ. ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪಪೂ ಪ್ರಾಂಶುಪಾಲ ವೆಂಕಟೇಶ್ ಮೂರ್ತಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿದ್ದಾರೆ.