Mangalore: ಸಂವಿಧಾನ ಜಾಗೃತಿ ಸಮಾವೇಶ
Saturday, February 24, 2024
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಶುಕ್ರವಾರ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನ ಜಾಗೃತಿ ಸಮಾವೇಶಕ್ಕೆ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಲ್ಲದೇ, ಎನ್ಸಿಸಿ ಭೂದಳ ಮತ್ತು ನೌಕಾದಳದ ವಿದ್ಯಾರ್ಥಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾರ್ವಜನಿಕರಿಗೆ ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಿದರು.
ರಾಜ್ಯ ಸರ್ಕಾರವು ಸಂವಿಧಾನದ ಮಹತ್ವ ಹಾಗೂ ಅದರ ನಿರಂತರ ಮೌದ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದ 31 ಜಿಲ್ಲೆಗಳಲ್ಲಿ 26ನೇ ಜನವರಿ 2024 ರಿಂದ 23ನೇ ಫೆಬ್ರವರಿ 2024ರವರೆಗೆ ನಿರಂತರವಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 23ರಂದು ಈ ಅಭಿಯಾನದ ಸಮಾರೋಪ ಸಮಾರಂಭದ ಭಾಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನಗರದ ವಿವಿಧ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.