Mangalore: ಜೆರೋಸಾ ಶಾಲೆಯ ತನಿಖೆಗೆ ಹಿರಿಯ ಐಎಎಸ್ ಅಧಿಕಾರಿ ನೇಮಕ

Mangalore: ಜೆರೋಸಾ ಶಾಲೆಯ ತನಿಖೆಗೆ ಹಿರಿಯ ಐಎಎಸ್ ಅಧಿಕಾರಿ ನೇಮಕ


ಮಂಗಳೂರು: ನಗರದ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಧರ್ಮ ನಿಂದನೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಹಾಗೂ ಅದರ ನಂತರದ  ಬೆಳವಣಿಗೆಗಳ ಕುರಿತು ಸಮಗ್ರ ತನಿಖೆ ನಡೆಸಲು ಐಎಎಸ್ ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯ ಜಿಲ್ಲಾ ಹೆಚ್ಚುವರಿ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ತ ನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದರು.

ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿಕ್ಷಕಿ ಪಾಠ ಮಾಡುವಾಗ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಶಾಸಕರು,  ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ಇದು ದಕ್ಷಿಣ ಕನ್ನಡ ಜಿಲ್ಲೆಗೆ ಕೆಟ್ಟ ಹೆಸರು. ಇಲ್ಲಿನ ಜನತೆ ತಲೆತಗ್ಗಿಸುವಂತೆ ಮಾಡಿದ್ದಾರೆ. ಶಾಸಕರ ನಡವಳಿಕೆಯಿಂದ ಬೇಸರವಾಗಿದೆ. ಘಟನೆ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಶಾಸಕರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿಯವರು ಹೇಳಿದಾಕ್ಷಣ  ಪ್ರಕರಣ ಹಿಂಪಡೆಯಲಾಗದು. ತನಿಖೆ ನಡೆಯುತ್ತಿದ್ದು, ತಪ್ಪು ಎಸಗಿದ್ದು ದೃಢಪಟ್ಟರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವರು ಹೇಳಿದರು.

ಶಿಕ್ಷಕಿಯ ವಿರುದ್ಧವೂ ಶಿಕ್ಷಣ ಇಲಾಖೆ ತನಿಖೆ ನಡೆಸುತ್ತದೆ. ಪೊಲೀಸರು ತನಿಖೆ ನಡೆಸುವುದಿಲ್ಲ, ಹಾಗಾಗಿ ಎಫ್‌ಐಆರ್ ದಾಖಲಿಸಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದುಬರುತ್ತದೆ ಎಂದರು.

ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯ ಎದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಿನಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನತೆ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಡಾ.ಭರತ್ ಶೆಟ್ಟಿ ಮತ್ತು ಶರಣ್‌ಪಂಪ್‌ವೆಲ್ ಮೇಲೆ ಸುಳ?ಳು ಕೇಸು ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್‌ನಲ್ಲಿ ಕುಳಿತುಕೊಂಡು ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ  ಎನ್ನುವುದು ತಪ್ಪಲ್ಲವೇ, ಪ್ರಚೋದನಕಾರಿ ಹೇಳಿಕೆ ವಿರುದ್ಧ ಕೇಸು ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article