Mangalore: ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ

Mangalore: ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ


ಮಂಗಳೂರು: ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಈ ಆಸ್ತಿಯನ್ನು ಕಾಪಾಡಿಕೊಂಡು ಬಂದಿರುವ ನಿಮಗೆ ಈಶ್ವರ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಇದು ತುಳುನಾಡಿನ ಪವಿತ್ರವಾದ ಭೂಮಿ. ಸರ್ವಜನಾಂಗದ ಶಾಂತಿಯ ತೋಟವಾಗಿ ಈ ಭೂಮಿಗೆ ವಿಶೇಷ ಶಕ್ತಿ ಇದೆ. ಇದು ವಿದ್ಯಾ ಕ್ಷೇತ್ರ, ಆರ್ಥಿಕ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಎಲ್ಲಾ ರಂಗದಲ್ಲೂ ಉದ್ಯೋಗ ಸೃಷ್ಟಿಸುವ ಪವಿತ್ರ ಭೂಮಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಮಂಗಳೂರಿನ ವಾಮಂಜೂರಿನಲ್ಲಿ ನಡೆದ ತುಳುನಾಡಿನ ಕಂಬಳ ತಿರುವೈಲೋತ್ಸವ ಕಾರ್ಯಕ್ರಮದಲ್ಲಿ ಅವರು ಫೆ.೧೭ ರಂದು ಭಾಗವಹಿಸಿ ಮಾತನಾಡಿದರು.

ಈ ಭೂಮಿಯಲ್ಲಿ ನಮ್ಮ ನಾಡಿನ ಕ್ರೀಡೆಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಬರಲಾಗಿದೆ. ಈ ಭಾಷೆ, ಸಂಸ್ಕೃತಿ ರಾಜ್ಯಕ್ಕೆ ಮೆರುಗು ನೀಡಿದೆ. ನಾನು ಇಂದು ಕಂಬಳ ವೀಕ್ಷಣೆ ಮಾಡಿ, ಇದರ ಅಭಿಮಾನಗಳಿಗೆ, ಆಯೋಜಕರು, ಪ್ರೋತ್ಸಾಹ ನೀಡುವವರಿಗೆ ಶುಭ ಹಾರೈಸಿ ನಿಮ್ಮ ಜತೆ ಸರ್ಕಾರ ಇದೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ ಎಂದರು.

ಈ ವರ್ಷ ನಾನು ಉಪಮುಖ್ಯಮಂತ್ರಿಯಾಗಿ ಬೆಂಗಳೂರಿನ ಜವಾಬ್ದಾರಿ ವಹಿಸಿಕೊಂಡ ನಂತರ ಇದನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಪ್ರೋತ್ಸಾಹವನ್ನು ನಾವು ಸದಾ ಮುಂದುವರಿಸುತ್ತೇವೆ. ಈ ಕಂಬಳ ಕ್ರೀಡೆ ದೇಶಕ್ಕೆ ಹಿರಿಮೆಯಾಗಿದೆ. ವಿಶ್ವಮಟ್ಟದಲ್ಲಿ ಈ ಕ್ರೀಡೆ ಗುರುತಿಸಿಕೊಳ್ಳಬೇಕು ಎಂದು ನಾವು ಬಯಸುತ್ತಿದ್ದು, ಇದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡಲು ನಾನು ಬದ್ಧ ಎಂದು ಹೇಳಿದರು.

ನಿಮ್ಮ ಸರ್ಕಾರ ನಿಮ್ಮ ಜತೆ ಇರಲಿದೆ. ಇದನ್ನು ಉಳಿಸಿ ಬೆಳೆಸಿ. ಈ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರುತ್ತೇನೆ ಎಂದು ಹೇಳಿದರು.













Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article