Mangalore: ಪ್ರಗತಿ ಹಿನ್ನಡೆಯ ಸಂಕೇತ

Mangalore: ಪ್ರಗತಿ ಹಿನ್ನಡೆಯ ಸಂಕೇತ


ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗಕ್ಕೆ ಯಾವುದೇ ಯೋಜನೆ ಘೋಷಿಸಿಲ್ಲ. ಈ ದೇಶದಲ್ಲಿ ಅತೀ ದೊಡ್ಡ ಸಂಖ್ಯೆಯಲ್ಲಿರುವ ಆದಾಯ ತೆರಿಗೆದಾರರಿಗೆ ಹೇಳುವಂತಹ ಯಾವುದೇ ಘೋಷಣೆಯಿಲ್ಲ. ನಿಜಕ್ಕೂ ನಿರಾಶದಾಯಕ ಬಜೆಟ್ ಇದಾಗಿದ್ದು, ಮುಂದೆ ಆಡಳಿತಕ್ಕೆ ಬರುವ ವಿಶ್ವಾಸ ಬಿಜೆಪಿಯವರಿಗಿಲ್ಲ ಎಂದು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article