Moodubidire: ನರೇಗಾ ದಿನಾಚರಣೆ: ಫಲಾನುಭವಿಗಳಿಗೆ ಪ್ರಶಂಸಾ ಪತ್ರ ವಿತರಣೆ
Friday, February 2, 2024
ಮೂಡುಬಿದಿರೆ: ತಾಲೂಕಿನ ಶಿರ್ತಾಡಿ ಗ್ರಾಮ ಪಂಚಾಯತ್‌ನಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ ‘ನರೇಗಾ ದಿನ’ವನ್ನು ಆಚರಿಸಲಾಯಿತು.
2023-24ನೇ ಸಾಲಿನ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಯಲ್ಲಿ 100 ಮಾನವ ದಿನಗಳನ್ನು ಪೂರೈಸಿದ ಫಲಾನುಭವಿಗಳಿಗೆ ಪ್ರಶಂಸಾ ಪತ್ರ ಹಾಗೂ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ 100 ಮಾನವ ದಿನ ಗುರುತಿನ ಟಿ-ಶರ್ಟ್ ಹಾಗೂ ಕ್ಯಾಪ್ ನೀಡಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೆಸ್ ಡಿ’ಸೋಜಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹುನಗುಂದ, ಐಇಸಿ ಸಂಯೋಜಕಿ ಅನ್ವಯ, ಪಂಚಾಯತ್ ಸಿಬ್ಬಂದಿಗಳಾದ ಪ್ರತಿಭಾ, ಯಶೋಧರಾ, ಅಕ್ಷಯ್, ವೈಷ್ಣವಿ ಮತ್ತಿತರರು ಉಪಸ್ಥಿತರಿದ್ದರು.
