Moodubidire: ನಾಪತ್ತೆಯಾಗಿದ್ದ ಬಿಪಿಟಿ ವಿದ್ಯಾರ್ಥಿನಿ ವಿವಾಹವಾಗಿ ಪತ್ತೆ

Moodubidire: ನಾಪತ್ತೆಯಾಗಿದ್ದ ಬಿಪಿಟಿ ವಿದ್ಯಾರ್ಥಿನಿ ವಿವಾಹವಾಗಿ ಪತ್ತೆ


ಮೂಡುಬಿದಿರೆ: ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿಪಿಟಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಂದು ಕೇರಳದಲ್ಲಿ ವಿವಾಹವಾಗಿ ಪತ್ತೆಯಾಗಿದ್ದಾರೆ.

ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ನಾಪತ್ತೆಯಾಗಿರುವ ವಿದ್ಯಾರ್ಥಿನಿ. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿರುವ ಮಾಹಿತಿ ಇದ್ದು ಅನಂತರ ಅಲ್ಲಿಂದ ಕಾಲೇಜಿಗೆ ಹೋಗದೆ ಕಾಣೆಯಾಗಿದ್ದಳು. ಭಾನುವಾರ ಕೇರಳದಲ್ಲಿ ಮದುವೆಯಾಗಿರುವುದಾಗಿ ತಿಳಿದುಬಂದಿದೆ.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article