
Moodubidire: ಬೀದಿ ನಾಟಕದ ಮೂಲಕ ಕಸ ವಿಲೇವಾರಿ ಬಗ್ಗೆ ಅರಿವು ಮೂಡಿಸಿದ ಆಳ್ವಾಸ್ ವಿದ್ಯಾರ್ಥಿಗಳು
ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ನಮೂಹ ಸಂಹವನ ವಿಭಾಗದ ಜಾಹಿರಾತು ಮತ್ತು ಸಾರ್ವಜನಿಕ ಸಂಪರ್ಕ ಮುಕ್ತ ಆಯ್ಕೆಯ (ಓಪನ್ ಇಲೆಕ್ಟಿವ್) ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯದ ಭಾಗವಾಗಿ ಈ ಬೀದಿ ನಾಟಕವನ್ನು ಹಮ್ಮಿಕೊಂಡಿದ್ದರು.
ಮೂಡುಬಿದಿರೆಯ ಪುರಸಭೆಯ ಸಹಯೋಗದೊಂದಿಗೆ ನಡೆದ ಈ ಜಾಗೃತಿ ಕಾರ್ಯಕ್ರಮವನ್ನು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರು ಸ್ವರಾಜ್ಯ ಮೈದಾನದಲ್ಲಿ ಉದ್ಘಾಟಿಸಿದರು.
ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಸಾದ್ ಕುಮಾರ್, ವಾರ್ಡ್ ಸದಸ್ಯ ರಾಜೇಶ್ ನಾಯ್ಕ್ ಪುರಸಭೆಯ ಪರಿಸರ ಅಭಿಯಂತರೆ ಶಿಲ್ಪಾ ಎಸ್., ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ ಬೀದಿ ನಾಟಕವನ್ನು ಆಳ್ವಾಸ್ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಸುಧೀಂದ್ರ ಶಾಂತಿ ನಿರ್ದೇಶಿಸಲಿದ್ದಾರೆ. ವಿದ್ಯಾರ್ಥಿಗಳ ತಂಡವು ನಗರದ ಮಾರ್ಕೆಟ್ ರೋಡ್ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಬೀದಿ ನಾಟಕವನ್ನು ಪ್ರದರ್ಶಿಸಿತ್ತು. ಸಮಾಜ ಕಾರ್ಯ ಕಾಲೇಜಿನ ಪ್ರಾಧ್ಯಾಪಕಿ ಡಾ. ಮಧುಮಾಲ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಜಾಹಿರಾತು ಹಾಗೂ ಸಾರ್ವಜನಿಕ ಸಂಪರ್ಕ ವಿಷಯವನ್ನು ಕಲಿಯುವ ವಿದ್ಯಾರ್ಥಿಗಳಿಗೆ ಒಂದು ಕಾರ್ಯಕ್ರಮವನ್ನು ಆಯೋಜನೆ ಮಾಡುವ ಹಾಗೂ ಸಾರ್ವಜನಿಕ ಸಂಪರ್ಕದಲ್ಲಿ ಜನರನ್ನು ಮನವೊಲಿಸುವ ಕೌಶಲ್ಯಗಳನ್ನು ಪ್ರಾಯೋಗಿಕವಾಗಿ ಕಲಿಯುವ ನಿಟ್ಟಿನಲ್ಲಿ ಈ ಬೀದಿನಾಟಕ ಹಮ್ಮಿಕೊಳ್ಳಲಾಗಿತ್ತು.