New Dheli: ಎಲ್.ಕೆ. ಅಡ್ವಾಣಿಗೆ ಭಾರತ ರತ್ನ ಘೋಷಣೆ
Saturday, February 3, 2024
ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ' ನೀಡಲಾಗುವುದು ಎಂದು ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಅವರು, ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಅವರೊಂದಿಗೆ ಮಾತನಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಅವರು ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿ. ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಯಾರೂ ಮರೆಯುವಂತಿಲ್ಲ. ತಳಮಟ್ಟದಿಂದ ಕೆಲಸ ಆರಂಭಿಸಿ ದೇಶದ ಉಪಪ್ರಧಾನಿ ಹುದ್ದೆಗೆ ತಲುಪಿದ್ದರು ಎಂದು ಅಭಿನಂದಿಸಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ನಂತರ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ಕ್ಕೆ ಭಾಜನರಾದ ಎರಡನೇ ಬಿಜೆಪಿ ನಾಯಕ ಎಂಬ ಹೆಗ್ಗಳಿಕೆ ಲಾಲ್ ಕೃಷ್ಣ ಅಡ್ವಾಣಿ ಪಾತ್ರರಾಗಿದ್ದಾರೆ.