
Putturu: ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಬಹುಮಾನ ವಿತರಣೆ
Wednesday, February 7, 2024
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟದ ಬಹುಮಾನ ಕಾರ್ಯಕ್ರಮ ಶುಕ್ರವಾರ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಿತು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಕೃಷಿಕ ಬಲ್ನಾಡು ಸೀತಾರಾಮ ಭಟ್ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಕ್ರೀಡಾ ಮನೋಭಾವ, ವಿದ್ಯಾರ್ಥಿಯ ಮುಂದಿನ ಸಾಧನೆಗೆ ಸ್ಫೂರ್ತಿ ಎಂದು ಹೇಳಿದರು.
ಅಂಬಿಕಾ ಸಮೂಹ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸೀಮಾ ನಾಗರಾಜ್, ಶಾಲಾ ಪ್ರಾಂಶುಪಾಲೆ ಮಾಲತಿ ಡಿ., ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಸನ್ಮಯ್ ಪ್ರಾರ್ಥಿಸಿ, ಶಿಕ್ಷಕಿ ಗೌರಿ ಕಾರ್ಯಕ್ರಮ ನಿರೂಪಿಸಿದರು.