Sakaleshapura: ಕೆಎಸ್‌ಆರ್‌ಟಿಸಿ ಬಸ್‌ಗೆ ಅಪಘಾತ: ಓರ್ವ ಮೃತ್ಯು, ಹಲವರಿಗೆ ಗಾಯ

Sakaleshapura: ಕೆಎಸ್‌ಆರ್‌ಟಿಸಿ ಬಸ್‌ಗೆ ಅಪಘಾತ: ಓರ್ವ ಮೃತ್ಯು, ಹಲವರಿಗೆ ಗಾಯ


ಸಕಲೇಶಪುರ: ಬೆಂಗಳೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ತಾಲೂಕಿನ ಬಾಗೆ ಗ್ರಾಮದಲ್ಲಿ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿ. ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,  ಗಾಯಾಳುನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಶಾಲೆಯ ಕಾಂಪೌಂಡ್ ಹಾಗೂ ಮನೆಗೆ ಢಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದರು ಅಪಾಯದಿಂದ ಪಾರಾಗಿದ್ದಾರೆ.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article