Byndoor: ಮಾ.8: ತಾಯಿನಾಡು-ಗೋಳಿಹೊಳೆಯಲ್ಲಿ ಮಹಾ ಶಿವರಾತ್ರಿ
Saturday, March 2, 2024
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಸಮೀಪದ ಶ್ರೀ ಕ್ಷೇತ್ರ ತಾಯಿನಾಡಿನ ಶ್ರೀ ಅಮೃತೇಶ್ವರಿ ಹಾಗೂ ಶ್ರೀ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಮಹಾಶಿವರಾತ್ರಿ ಹಬ್ಬದ ಉತ್ಸವವು ಮಾ.8 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಾ.7 ರಂದು ಸನ್ನಿಧಾನದಲ್ಲಿ ಸಂಜೆ ಶ್ರೀ ನಾಗದೇವರಿಗೆ ‘ಆಶ್ಲೇಷಾ ಬಲಿ’ ಜರುಗಲಿರುವುದು.
ಮಾ.8 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಗಣಪತಿ ದೇವರಿಗೆ ಗಣಹೋಮ, ಶ್ರೀ ದೇವಿಗೆ ದುರ್ಗಾ ಹೋಮ, ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಅಲಂಕಾರ ಪೂಜೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಮಹಾ ‘ಅನ್ನ ಸಂತರ್ಪಣೆ’ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30 ರಿಂದ ಶ್ರೀ ಸಿದ್ಧಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 10 ಗಂಟೆಯಿಂದ ಮಧ್ಯ ರಾತ್ರಿಯ ತನಕ ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ಹಾಗೂ ಉಪಹಾರ ವಿತರಣೆ ನಡೆಯಲಿದೆ ಎಂದು ಜಯರಾಮ ಪೂಜಾರಿ ಕುಟುಂಬಸ್ಥರು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




