Bantwal: ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಬೇಬಿಕುಂದರ್ ನೇಮಕ
Friday, March 15, 2024
ಬಂಟ್ವಾಳ: ಬಂಟ್ವಾಳ ನಗರ ಯೋಜನಾ ಪ್ರಾಧಿಕಾರಕ್ಕೆ ನಿರೀಕ್ಷೆಯಂತೆ ಬೇಬಿಕುಂದರ್ ಅವರನ್ನು ಅಧ್ಯಕ್ಷರಾಗಿ ಹಾಗೂ ಮೂವರನ್ನು ಸದಸ್ಯರನ್ನಾಗಿ ನೇಮಕಗೊಂಡಿದ್ದಾರೆ.
ಬಂಟ್ವಾಳ ಕಸ್ಬಾ ಗ್ರಾಮದ ಮನೋಹರ ಕುಲಾಲ್ ನೇರಂಬೋಳ್, ಬಿ.ಮೂಡ ಗ್ರಾಮದ ಅಜ್ಜಿಬೆಟ್ಟುವಿನ ಹರೀಶ್ ಹಾಗೂ ಪಾಣೆಮಂಗಳೂರು ಗ್ರಾಮದ ಗೂಡಿನಬಳಿ ನಿವಾಸಿ ಅಬ್ದುಲ್ ರಜಾಕ್ ಅವರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಮಾಜಿ ಸಚಿವ ರಮಾನಾಥ ರೈ ಅವರ ಶಿಫಾರಸಿನಂತೆ ಈ ನೇಮಕವಾಗಿದೆ.
ಪ್ರಸ್ತುತ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಬೇಬಿಕುಂದರ್ ವಿಜಯಬ್ಯಾಂಕ್‌ನ ಉದ್ಯೋಗಿಯಾಗಿದ್ದು, ಬಂಟ್ವಾಳ ಶಾಖೆಯ ವ್ಯವಸ್ಥಾಪಕರಾಗಿದ್ದಾಗ ಹುದ್ದೆಗೆ ಸ್ವಯಂ ನಿವೃತ್ತಿ ಘೋಷಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ದುಮುಕಿದ್ದರು.