Charmadi: ಚಾರ್ಮಾಡಿ ಘಾಟ್ ತಿರುವಿನಲ್ಲಿ ಸಾರಿಗೆ ಬಸ್ ಬ್ರೇಕ್ ಫೈಲ್: ತಪ್ಪಿದ ಭಾರಿ ದುರಂತ
Saturday, March 9, 2024
ಚಾರ್ಮಾಡಿ: ಚಾರ್ಮಾಡಿ ಘಾಟ್‌ನ ತಿರುವಿನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಡೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಬ್ರೇಕ್ ಫೈಲ್‌ನಿಂದ ನಿಯಂತ್ರಣ ಕಳೆದುಕೊಂಡರೂ ಚಾಲಕ ಸಂತೋಷ್ ಸಮಯಪ್ರಜ್ಞೆಯಿಂದ ಡಿವೈಡರ್‌ಗೆ ಢಿಕ್ಕಿ ಹೊಡೆಸಿ ಬಸ್ ನಿಲ್ಲಿಸಿದ ಕಾರಣ ಭಾರಿ ದುರಂತದಿಂದ ಪಾರಾದಂತಾಗಿದೆ.
ಬಸ್ ಡಿವೈಡರ್‌ಗೆ ಢಿಕ್ಕಿ ಹೊಡೆಯುತ್ತಿದ್ದಂತೆ ಭಾರಿ ಪ್ರಮಾಣದ ಹೊಗೆ
ಹೊರಬರಲಾರಂಭಿಸಿದ್ದು, ಬಸ್‌ನಲ್ಲಿದ್ದ ಸುಮಾರು 70ಕ್ಕಿಂತ ಹೆಚ್ಚು ಪ್ರಯಾಣಿಕರು ಹೊರಗಿಳಿದು ಭಾರಿ ಅಪಾಯದಿಂದ ಪಾರಾಗಿದ್ದಾರೆ.
ಇಳಿಜಾರಿನಲ್ಲಿ ಬಸ್ ಬ್ರೇಕ್ ಫೈಲ್ ಆದ ಹಿನ್ನೆಲೆಯಲ್ಲಿ ಚಾಲಕ ಹರಸಾಹಸ ಪಟ್ಟು ಡಿವೈಡರ್‌ಗೆ ಢಿಕ್ಕಿ ಹೊಡೆದುದರಿಂದ ಚಾಲಕ, ನಿರ್ವಾಹಕ ಸಹಿತ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನಲ್ಲಿ ಈ ದುರಂತ ಸಂಭವಿಸಿದೆ.