Chikkamagaluru: ಚುನಾವಣೆ ಅಕ್ರಮ ತಡೆಗೆ ಸೀವಿಜಲ್ ಆಪ್: ಮೀನಾ ನಾಗರಾಜ್

Chikkamagaluru: ಚುನಾವಣೆ ಅಕ್ರಮ ತಡೆಗೆ ಸೀವಿಜಲ್ ಆಪ್: ಮೀನಾ ನಾಗರಾಜ್


ಚಿಕ್ಕಮಗಳೂರು: ಮುಕ್ತ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣೆ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸೀವಿಜಲ್ ಆಪ್ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಚುನಾವಣೆ ಅಕ್ರಮಗಳ ಬಗ್ಗೆ ದೂರುಗಳಿದ್ದಲ್ಲಿ ಸೀವಿಜಲ್ ಆಪ್‌ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಗೆ ಅಥವಾ ಪಕ್ಷಕ್ಕೆ ಮತ ಹಾಕುವಂತೆ ಆಮಿಷಗಳನ್ನು ಒಡ್ಡಿದರೆ, ಹಣ, ಉಡುಗೊರೆ, ಕೂಪನ್‌ಗಳ ವಿತರಣೆ, ಮದ್ಯದ ಆಸೆ ತೋರಿದರೆ. ಮತದಾರರು ಸೀವಿಜಲ್ ಆಪ್ ಮೂಲಕ ದೂರು ನೀಡಬಹುದು. ಜೊತೆಗೆ ಮತದಾರರಿಗೆ ಅನುಮತಿ ಇಲ್ಲದಿದ್ದರು. ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅಂಟಿಸುವುದು. ಆಸ್ತಿ ವಿರೂಪಗೊಳಿಸುವುದು, ಧಾರ್ಮಿಕ ಅಥವಾ ಕೋಮು ಪ್ರಚೋದಿತ ಭಾಷಣ ಮಾಡಿದರು ಆಪ್ ಮೂಲಕ ದೂರು ನೀಡಬಹುದು.

ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧವಿದ್ದರು ಪ್ರಚಾರ ಮಾಡುವುದು. ಮತದಾನದ ದಿನ ವಾಹನಗಳಲ್ಲಿ ಮತದಾರರನ್ನು ಕರೆ ತಂದು ಪ್ರಲೋಬನೆಗೊಳಿಸುವುದು, ಮತ ಹಾಕುವಂತೆ ಬೆದರಿಸುವುದು ಹಾಗೂ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದರು ಸೀವಿಜಲ್ ಆಪ್ ನಲ್ಲಿ ದೂರುಸಲ್ಲಿಸಲು ಅವಕಾಶವಿದೆ. ಸೀವಿಜಲ್ ಮೂಲಕ ಸಲ್ಲಿಕೆಯಾಗುವ ದೂರುಗಳಿಂದ ಘಟನೆ ನಡೆದ ಸ್ಥಳದ ಮಾಹಿತಿ ಲಭ್ಯವಾಗುವುದರಿಂದ ಪ್ರಕರಣ ನಡೆದ ಸ್ಥಳಕ್ಕೆ ಅಧಿಕಾರಿಗಳು ತಲುಪಬಹುದು.

ಸಾರ್ವಜನಿಕರು ಪ್ಲೇ ಸ್ಟೋರ್‌ನಲ್ಲಿ ಸೀವಿಜಲ್ ಆಪ್ ಡೌನ್ ಲೋಡ್ ಮಾಡಿಕೊಂಡು ಬಳಸಬಹುದು. ಅಕ್ರಮಗಳ ಕುರಿತು ಛಾಯಾ ಚಿತ್ರ ಹಾಗೂ ವೀಡಿಯೋಗಳನ್ನು ಅಪ್ ಲೋಡ್ ಮಾಡಬಹುದು. ದೂರು ನೀಡುವ ಸಾರ್ವಜನಿಕರ ಹೆಸರುಗಳನ್ನು ಗೌಪ್ಯವಾಗಿ ಇಡಲಾಗುವುದು. ಸೀವಿಜಿಲ್‌ನಲ್ಲಿ ದಾಖಲಾಗುವ ದೂರುಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ಕಛೇರಿ, ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಗಳಿದ್ದಾರೆ.

ದೂರು ದಾಖಲಾದ ಕೂಡಲೇ ಪರಿಶೀಲಿಸಿ ದೂರು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ರವಾನಿಸಿ ದೂರಿನ ಕುರಿತು ತುರ್ತು ಕ್ರಮ ವಹಿಸುವಂತೆ ನೋಡಿಕೊಳ್ಳಲಾಗುತ್ತದೆ. ಗರಿಷ್ಠ ೧೦೦ ನಿಮಿಷಗಳ ವರೆಗೆ ದೂರುಗಳನ್ನು ಇತ್ಯರ್ಥ ಪಡಿಸಲಾಗುತ್ತದೆ.

ಸಾರ್ವಜನಿಕರು ಸೀವಿಜಲ್ ಆಪ್ ಮಾತ್ರವಲ್ಲದೇ ಉಚಿತ ಸಹಾಯವಾಣಿ ಸಂಖ್ಯೆ ೧೯೫೦ ಕ್ಕೆ ಕರೆ ಮಾಡಿ ಚುನಾವಣಾ ಅಕ್ರಮಗಳ ಬಗ್ಗೆ ದೂರು ನೀಡಬಹುದು. ಈ ಮೂಲಕ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article