Gurupura: ಕಾಂಗ್ರೆಸ್ ಕಾರ್ಯಕರ್ತರ ಸಭೆ

Gurupura: ಕಾಂಗ್ರೆಸ್ ಕಾರ್ಯಕರ್ತರ ಸಭೆ


ಮಂಗಳೂರು: ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾರ್ಯಕರ್ತರ ಸಭೆಯು ಮಾ.18 ರಂದು ಕೈಕಂಬ ಮೇಘಾ ಪ್ಲಾಝಾ ಹಾಲ್ ನಲ್ಲಿ ನಡೆಯಿತು.

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸುರೇಂದ್ರ ಕಂಬಳಿ ಹಾಗೂ ಪದ್ಮರಾಜ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಕೆ.ಪಿ.ಸಿ.ಸಿ ಸದಸ್ಯರು, ಡಿ.ಸಿ.ಸಿ ಸದಸ್ಯರು, ಗುರುಪುರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು, ವಲಯ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಚುನಾಯಿತ್ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂತನ ಚುನಾಯಿತ ವಲಯ ಅಧ್ಯಕ್ಷರುಗಳನ್ನು ಹಾಗೂ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article