Mangalore: ಎಸ್‌ಎಸ್‌ಎಲ್‌ಸಿ ಪರೀಕ್ಷೆ: 343 ವಿದ್ಯಾರ್ಥಿಗಳು ಗೈರು
Saturday, March 30, 2024
ಮಂಗಳೂರು: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಮಾ.30ರಂದು ವಿಜ್ಞಾನ ಪರೀಕ್ಷೆ ನಡೆಯಿತು. ಜಿಲ್ಲೆಯಲ್ಲಿ ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ವಿವರ ಇಂತಿದೆ.
ಒಟ್ಟು 29,346ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 29,003 ವಿದ್ಯಾಥಿಗಳು ಹಾಜರಾಗಿದ್ದು, 343 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.