Mangalore: ವಿವಿ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಯೂತ್ ರೆಡ್ ಕ್ರಾಸ್, ಎನ್.ಎಸ್.ಎಸ್ ಮತ್ತು ಕಾಲೇಜಿನ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಕಾಲೇಜು ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ
ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮಾತನಾಡಿ, ಯೂತ್ ರೆಡ್ ಕ್ರಾಸ್ ವತಿಯಿಂದ ನಡೆದ
ರಕ್ತದಾನ ಶಿಬಿರ ಉತ್ತಮವಾಗಿ ಯಶಸ್ವಿಯಾಗಿದ್ದು, ಇಂತಹ ಸ್ವಚ್ಛತಾ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ
ಎಂದು ವಿದ್ಯಾರ್ಥಿಗಳನ್ನು ಪ್ರಶಂಸೆ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಸಂಘದ
ಉಪನಿರ್ದೇಶಕಿ ಪ್ರೊ. ಲತಾ ಎ. ಪಂಡಿತ್, ಯುವ ಜನರಲ್ಲಿ ಸ್ವಚ್ಛತೆಯ ಬಗ್ಗೆ ಅರಿವಿನ ಜೊತೆಗೆ ಕಾಳಜಿಯಿಂದ
ಸ್ವಚ್ಛತಾ ಕಾರ್ಯಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು
ಹೇಳಿದರು.
ಬೇಸಿಗೆಯಲ್ಲಿ ಬಿಸಿಲಿನ
ತಾಪ ಹೆಚ್ಚಾಗಿ ಪ್ರಾಣಿ-ಪಕ್ಷಿಗಳ ಬಾಯಾರಿಕೆ ನೀಗಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ
ಮುಲ್ಲೈ ಮುಹಿಲನ್ ಎಂ. ಪಿ. ಅವರು ಪ್ರತಿ ಕಾಲೇಜುಗಳಲ್ಲಿ ಯೂತ್ ರೆಡ್ ಕ್ರಾಸ್ ವತಿಯಿಂದ ಮಣ್ಣಿನ
ಪಾತ್ರೆ ನೀಡುವ ಮೂಲಕ ಪ್ರಾಣಿ ಪಕ್ಷಿಗಳ ಬಗೆಗೆ ಕಾಳಜಿ ವಹಿಸುವಂತೆ ಕರೆ ನೀಡಿದ್ದಾರೆ. ಆ ನಿಟ್ಟಿನಲ್ಲಿ
ಮಣ್ಣಿನ ಪಾತ್ರೆಯನ್ನು ಸಾಂಕೇತಿಕವಾಗಿ ಕಾಲೇಜಿನ ಪ್ರಾಂಶುಪಾಲರಿಗೆ ಹಸ್ತಾಂತರಿಸಲಾಯಿತು.
ಇದೇ ವೇಳೆ, ಎನ್.ಎಸ್.ಎಸ್ ಅಧಿಕಾರಿ ಡಾ. ಗಾಯತ್ರಿ ಎನ್., ಯೂತ್ ರೆಡ್ ಕ್ರಾಸ್ ಅಧಿಕಾರಿ ಡಾ. ಭಾರತಿ ಪಿಲಾರ್ ಸೇರಿದಂತೆ
ನಾನಾ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.