Mangalore: ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆ
Sunday, March 17, 2024
ಮಂಗಳೂರು: ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗರಾದ ಸುಮಂತ್ ರಾವ್ ಆಯ್ಕೆಯಾಗಿದ್ದಾರೆ.
1991ರಿಂದ ವಿದ್ಯಾರ್ಥಿ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡು ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್‌ಎಸ್‌ಯುಐಯಲ್ಲಿ ಅವಿಭಾಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಧಾರ್ಮಿಕ ಕ್ಷೇತ್ರದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾವೂರಿನಲ್ಲಿ ಪರಿಚಯ ಕಲಾ ರಂಗ ಸಂಘವನ್ನು ಕಟ್ಟಿಕೊಂಡು ಮೊಸರು ಕುಡಿಕೆ ಉತ್ಸವವನ್ನು ಪ್ರಾರಂಭಿಸಿದರು. ಕಾವೂರು ವ್ಯವಸಾಯ ಸಹಕಾರಿ ಬ್ಯಾಂಕ್‌ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕರ್ನಾಟಕ ಸರಕಾರ ಆಹಾರ ಆಯೋಗದಲ್ಲಿ ಸದಸ್ಯರಾಗಿ ಆಯ್ಕೆಯಾಗುದರೊಂದಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಜಿಲ್ಲೆಯಿಂದ ಮೊದಲ ಬಾರಿಗೆ ಕ್ಷತ್ರಿಯ ಸಮಾಜಕ್ಕೆ ಅವಕಾಶ ಸಿಕ್ಕಿದೆ.