Mangalore: ಮಂಗಳೂರು ವಿವಿ: ಡಾ.ದೇವೇಂದ್ರಪ್ಪ ಹೆಚ್. ಮೌಲ್ಯಮಾಪನ ಕುಲಸಚಿವ
Monday, March 18, 2024
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ದೇವೇಂದ್ರಪ್ಪ ಹೆಚ್. ಅವರನ್ನು ವಿಶ್ವವಿದ್ಯಾನಿಲಯದ ಕುಲಸಚಿವ (ಮೌಲ್ಯಮಾಪನ)ರಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ರ 18ನೇ ಪ್ರಕರಣದ (1)ನೇ ಉಪ ಪ್ರಕರಣದಡಿ ಪ್ರವತ್ತವಾದ ಅಧಿಕಾರ ಚಲಾಯಿಸಿ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ.