Mangalore: ಸಾಪ್ಟ್ವೇರ್ ಉನ್ನತೀಕರಣದ ಸಲುವಾಗಿ ೧೦ ದಿನಗಳ ಕಾಲ ಮೆಸ್ಕಾಂ ಆನ್ಲೈನ್ ಸೇವೆಗಳ ಅಲಭ್ಯತೆ
Wednesday, March 6, 2024
ಮಂಗಳೂರು: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ರಾಜ್ಯದ ಎಲ್ಲಾ ಎಸ್ಕಾಂಗಳ ಆರ್‌ಎಪಿಡಿಆರ್‌ಪಿ ನಗರ ಪ್ರದೇಶದ ಗ್ರಾಹಕರಿಗೆ ವಿದ್ಯುತ್ ಬಿಲ್ಲುಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಇತ್ಯಾದಿ ಸೇವೆಗಳು ಮಾ.೧೦ ರಿಂದ ಮಾ.೧೯ ರವರೆಗೆ ಲಭ್ಯವಿರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮೆಸ್ಕಾಂಗೆ ಒಳಪಡುವ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು ಪ್ರದೇಶಗಳಲ್ಲಿ ಈ ಸೇವೆ ಲಭ್ಯವಿರುವುದಿಲ್ಲ.
ಉನ್ನತೀಕರಿಸಿದ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು ೧೫ ದಿನಗಳ ಕಾಲಾವಕಾಶ ಬೇಕಿದ್ದು, ಸದರಿ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಸೇವಾ ಸ್ಥಗಿತ ಕಾಲದಲ್ಲಿ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.