Mangalore: ಮಾದಕ ವಸ್ತು ಕೋಕೆನ್ ಪತ್ತೆ ಇಬ್ಬರು ಆರೋಪಿಗಳ ಸೆರೆ

Mangalore: ಮಾದಕ ವಸ್ತು ಕೋಕೆನ್ ಪತ್ತೆ ಇಬ್ಬರು ಆರೋಪಿಗಳ ಸೆರೆ


ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್‌ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್‌ನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರನನು ಮಂಗಳೂರಿನ ಅಂಬ್ಲ ಮೊಗರು ನಿವಾಸಿಗಳಾದ ಸದಕತ್ .ಯು ಯಾನೆ ಶಾನ್ ನವಾಜ್(31), ಮಹಮ್ಮದ್ ಅಶ್ಫಕ್ ಯಾನೆ ಅಶ್ಫಾ(25) ಎಂದು ಗುರುತಿಸಲಾಗಿದೆ.

ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇದಿತ ಮಾದಕ ವಸ್ತುವಾದ ಕೋಕೆನ್‌ನ್ನು ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ. ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್‌ನ್ನು ಮಾರಾಟ/ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಹೊಂಡಾ ಅಕ್ಟಿವಾ ಸ್ಕೂಟರ್, 2,72,000೨, ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್‌ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು 5560 ರೂ.ವನ್ನು ವಶಕ್ಕೆ ಪಡೆದಿಸಿಕೊಂಡಿದ್ದು, ಒಟ್ಟು ಮೊತ್ತ 4,00,000 ರೂ. ಎಂದು ಅಂದಾಜಿಸಲಾಗಿದೆ.

ಆರೋಪಿ ಸದಕತ್.ಯು ಯಾನೆ ಶಾನ್ ನವಾಜ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ.

ಕಾರ್ಯಚರಣೆಯಲ್ಲಿ ಪಿಎಸ್‌ಐ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಭಾಗವಹಿಸಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article