Mangalore: ಎರಡು ನಾಮಪತ್ರ ಸಲ್ಲಿಕೆ
Thursday, March 28, 2024
ಮಂಗಳೂರು: ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ಮಾರ್ಚ್ 28ರಂದು ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ 2 ನಾಮಪತ್ರಗಳು ಸಲ್ಲಿಕೆಯಾಗಿವೆ.
ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಜನತಾದಳ ಯುನೈಟೆಡ್ ಪಕ್ಷದ ಅಭ್ಯರ್ಥಿಯಾಗಿ ಸುಪ್ರಿತ್ ಕುಮಾರ್ ಪೂಜಾರಿ ಅವರ ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.