Mangalore: ದಕ್ಷಿಣ ಭಾರತ ಮಾಸ್ಟರ್ ಅಥ್ಲೆಟಿಕ್ಸ್‌ ನ ಮುಕ್ತ ಚಾಂಪಿಯನ್ ಶಿಪ್ ನಲ್ಲಿ ಚಿನ್ನ-ಬೆಳ್ಳಿ ಪದಕ

Mangalore: ದಕ್ಷಿಣ ಭಾರತ ಮಾಸ್ಟರ್ ಅಥ್ಲೆಟಿಕ್ಸ್‌ ನ ಮುಕ್ತ ಚಾಂಪಿಯನ್ ಶಿಪ್ ನಲ್ಲಿ ಚಿನ್ನ-ಬೆಳ್ಳಿ ಪದಕ


ಮಂಗಳೂರು: ಇಲ್ಲಿಯ ರಥಬೀದಿಯಲ್ಲಿರುವ ಡಾ. ಪಿ. ದಯಾನಂದ ಪೈ-ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಶುಭ ಕೆ.ಹೆಚ್. ಅವರು ಮಾ.9 ಮತ್ತು 10 ರಂದು ಉಡುಪಿಯ ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಭಾರತ ಮಾಸ್ಟರ್ ಅಥ್ಲೆಟಿಕ್ಸ್‌ ನ ಮುಕ್ತ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಹೈಜಂಪ್ ನಲ್ಲಿ ಚಿನ್ನದ ಪದಕ ಹಾಗೂ ತ್ರಿಪಲ್ ಜಂಪ್ ನಲ್ಲಿ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.

ಶ್ರೀಲಂಕಾದ ಕೊಲಂಬೋದಲ್ಲಿ ಜೂನ್ ತಿಂಗಳಲ್ಲಿ ನಡೆಯಲಿರುವ ಇಂಡೋ-ಶ್ರೀಲಂಕಾ ಡೂಯಲ್ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಪೂಣೆಯ ಶಿವ ಛತ್ರಪತಿ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಮಾಸ್ಟರ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಹೈಜಂಪ್ ಮತ್ತು ತ್ರಿಪುಲ್ ಜಂಪ್ ನಲ್ಲಿ ಕಂಚಿನ ಪದಕವನ್ನು ಗಳಿಸಿದ್ದು, ಆಗಸ್ಟ್ ತಿಂಗಳಲ್ಲಿ ಸ್ವೀಡನ್ ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ವರ್ಲ್ಡ್ ಅಥ್ಲೆಟಿಕ್ಸ್ ಗೆ ಆಯ್ಕೆಯಾಗಿರುತ್ತಾರೆ. 

ಇವರು ಮಂಗಳೂರಿನ ಜಪ್ಪು ನಿವಾಸಿಯಾಗಿದ್ದು, ಲಯನ್ಸ್ ಕ್ಲಬ್ ಮಿಲಾಗ್ರಿಸ್ ನ ಸದಸ್ಯೆಯಾಗಿದ್ದಾರೆ.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article