Moodubidire: ರಾಷ್ಟ್ರ ಮೊದಲು ತಿರಂಗಾ ಯಾತ್ರೆ
Tuesday, March 5, 2024
ಮೂಡುಬಿದಿರೆ: ಭಾರತೀಯ ಜನತಾ ಯುವ ಮೋರ್ಚಾ ಮೂಲ್ಕಿ ಮೂಡುಬಿದಿರೆ ಇದರ ವತಿಯಿಂದ 'ಸುಭದ್ರ ಭಾರತಕ್ಕಾಗಿ, ಸುರಕ್ಷಿತ ಕರ್ನಾಟಕ' ಎಂಬ ಧ್ಯೇಯದೊಂದಿಗೆ ಮೂಡುಬಿದಿರೆಯಲ್ಲಿ ರಾಷ್ಟ್ರ ಮೊದಲು ತಿರಂಗಾ ಯಾತ್ರೆ ಮಂಗಳವಾರ ನಡೆಯಿತು.
ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಿಂದ ಇನ್ನರ್ ವ್ಹೀಲ್ ವೃತ್ತದವರೆಗೆ ತಿರಂಗಾ ಯಾತ್ರೆ ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಕ್ಯಾ. ಬ್ರಿಜೇಶ್ ಚೌಟ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್ ಕೊಟ್ಟಾರಿ ಸೇರಿದಂತೆ ಪಕ್ಷದ ಪ್ರಮುಖರಾದ ಭುವನಾಭಿರಾಮ ಉಡುಪ, ಈಶ್ವರ್ ಕಟೀಲ್, ಕಾರ್ಯಕರ್ತರು ಉಪಸ್ಥಿತರಿದ್ದರು.
