Moodubidire: ಪೋಲಿಯೋ ಲಸಿಕಾ ಅಭಿಯಾನ
Sunday, March 3, 2024
ಮೂಡುಬಿದಿರೆ: ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರೋಟರಿ ಕ್ಲಬ್ ಮೂಡುಬಿದಿರೆ ಸಹಯೋಗದಲ್ಲಿ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಯಿತು.
ಶಾಸಕ ಉಮಾನಾಥ ಎ. ಕೋಟ್ಯಾನ್ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ., ಆರೋಗ್ಯ ರಕ್ಷಾ ಸಮಿತಿಯ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್, ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಮಕ್ಕಳ ತಜ್ಞರಾದ ಡಾ. ಮುರಳೀಕೃಷ್ಣ, ಡಾ. ವಸಂತ್, ಹಿರಿಯ ಆರೋಗ್ಯ ಮೇಲ್ವೀಚಾರಕಿ ಶಾಂತಮ್ಮ ಹಾಗೂ ರೋಟರಿ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

