Subramanya: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆಗೆ ಭೇಟಿ

Subramanya: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆಗೆ ಭೇಟಿ


ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾ.26 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. 

ದೇವಳದ ಒಳಗೆ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಹೊಸಳಿಗಮ್ಮ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. 

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ, ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ಈ ಹಿಂದೆ ಕೂಡ ದೇವರು ನಮ್ಮನ್ನು ಕೈ ಬಿಟ್ಟಿಲ್ಲ. ಒಳ್ಳೆಯದನ್ನೇ ಮಾಡಿದ್ದಾರೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದರು. 

ನಕ್ಸಲರು ಶಂಕೆ ಇರುವಂತ ಕೂಜಿ ಮಲೆ ಹಾಗೂ ಐನೆಕ್ಕಿದು ಗ್ರಾಮಗಳ ಮನೆಗಳಿಗೆ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಹಾಗೆ ಕೋವಿ ಪರವಾನಿಗೆ ಇರ್ತಕ್ಕಂತವರು ಡಿಪೋಸಿಟ್ ಮಾಡ ಬೇಕೋ ಬೇಡವ ಎನ್ನುವ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಕಡಬ ಬ್ಲಾಕ್ ಸುಧೀರ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ಭರತ್ ಮುಂಡೋಡಿ, ಧನಂಜಯ ಅರ್ಥಂಗಾಯ, ಮಮತಾ ಗಟ್ಟಿ, ಅಶೋಕ ನಿಕ್ರಾಜ, ಪಿ.ಸಿ. ವರ್ಗೀಸ್, ಮಾಧವ ಮಾನಾಡು, ಕೃಷ್ಣಪ್ಪ, ಪ್ರದೀಪ್ ಕಳಿಗೆ, ದಿನೇಶ್ ಮಡ್ತಿಲ್, ಹರೀಶ ಹಿಂಜಾಡಿ, ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲ ರಂಗಯ್ಯ, ಶಿವರಾಮ ರೈ, ಕೃಷ್ಣಮೂರ್ತಿ ಭಟ್ ಸುರೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article