Udupi: ಎ.3: ಜಯಪ್ರಕಾಶ ಹೆಗ್ಡೆ ನಾಮಪತ್ರ
Sunday, March 31, 2024
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಎಪ್ರಿಲ್ 3ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಅದಕ್ಕೂ ಮುನ್ನ 9 ಗಂಟೆಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಪಕ್ಷ ಕಾರ‍್ಯಕರ್ತರ ಸಭೆ ನಡೆಯಲಿದೆ. ಸಭೆಯಲ್ಲಿ ಕಾಂಗ್ರೆಸ್ ಮುಖಂಡರು, ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸುವರು.
ಎ.6: ಸಿಎಂ ಭೇಟಿ
ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಾಗಿ ಎ. 6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.