Udupi: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ: ನಿಷೇಧಾಜ್ಞೆ ಜಾರಿ
ಉಡುಪಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮಾ. 28ರಿಂದ ಏ. 5ರ ವರೆಗೆ ನಾಮಪತ್ರ ಸಲ್ಲಿಕೆ, 5ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏ. 8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಈ ಎಲ್ಲ ಪ್ರಕ್ರ್ರಿಯೆಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಲಿರುವುದರಿಂದ ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯುವ ಕಾರ್ಯ ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಾ. 28ರ ಬೆಳಿಗ್ಗೆ 6 ಗಂಟೆಯಿಂದ ಏ. 8ರ ಸಂಜೆ 6ರ ವರೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.
ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ನಿಷೇಧಿತ 100 ಮೀ. ಪರಿಧಿಯಲ್ಲಿ ಅಭ್ಯರ್ಥಿಯ ವಾಹನ ಒಳಗೊಂಡಂತೆ ಗರಿಷ್ಠ 3 ವಾಹನಗಳಿಗೆ ಮಾತ್ರ ಕಚೇರಿ ಅವರಣದಲ್ಲಿ ನಿಲುಗಡೆಗೆ ಅನುಮತಿ ನೀಡಲಾಗಿದೆ. ಚುನಾವಣಾಧಿಕಾರಿ ಕಚೇರಿಗೆ ಅಭ್ಯರ್ಥಿ ಒಳಗೊಂಡತೆ ಗರಿಷ್ಠ 5 ಮಂದಿಗೆ ಮಾತ್ರ ಅನುಮತಿ ನೀಡಲಾಗಿದೆ.
ಐದು ಮಂದಿಗಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು, ಆಯುಧ, ಶಸ್ತ್ರಾಸ್ತ್ರ ಮತ್ತು ಮಾರಕಾಸ್ತ್ರ ಹೊತ್ತು ತಿರುಗುವುದನ್ನು ನಿರ್ಬಂಧಿಸಲಾಗಿದೆ. ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀ. ಪರಿಧಿಯಲ್ಲಿ ಚುನಾವಣೆ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಭ್ಯರ್ಥಿಗಳು ಅನುಮತಿ ಹೊಂದಿದ ರಕ್ಷಣಾ ಇಲಾಖೆ ಹಾಗೂ ಅನುಮತಿ ಪಡೆದ ಮಾಧ್ಯಮದವರು ಹೊರತುಪಡಿಸಿ ಉಳಿದ ಎಲ್ಲಾ ವಿಧದ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಯಾವುದೇ ರೀತಿಯ ಘೋ?ಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸಬಾರದು. ಸಾರ್ವಜನಿಕ ಆಸ್ತಿಗಳನ್ನು ವಿರೂಪಗೊಳಿಸುವುದಾಗಲಿ ಅಥವಾ ನ?ಗೊಳಿಸುವುದನ್ನಾಗಲಿ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ